





ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ.5ರಂದು ಏರ್ಪಡಿಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಟ್ಟಂಪಾಡಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅಭಿನವರಾಜ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪಟ್ಟೆ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜಗೋಪಾಲ್ ಹಾಗೂ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಸವಿತಾ ಪಟ್ಟೆ ಇವರ ಪುತ್ರರಾಗಿದ್ದಾರೆ.








