ವಿಟ್ಲ: ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಕನ್ನಡ ಡಿಂಡಿಮ -2024” ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ, ಸಾಹಿತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಗೋಪಾಲಕೃಷ್ಣ ನೇರಳೆಕಟ್ಟೆ ರವರು ಮಾತನಾಡಿ, ಪೈಪೋಟಿಯಲ್ಲಿ ಆಂಗ್ಲ ಮಾಧ್ಯಮವನ್ನು ಕಲಿಸುತ್ತಾ ಕನ್ನಡವನ್ನು ಮರೆತುಬಿಡುತ್ತಿರುವ ಈ ಸಮಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಿ ಮಕ್ಕಳಿಗೆ ಕನ್ನಡದ ಬಗ್ಗೆ ಪ್ರೀತಿ ಮತ್ತು ಕನ್ನಡ ನಾಡು ನುಡಿಯ ಬಗ್ಗೆ ಹೆಮ್ಮೆ ಪಡುವಂತಹ ಕಾರ್ಯಕ್ರಮವನ್ನ ಹಮ್ಮಿಕೊಂಡ ಜನಪ್ರಿಯ ಸೆಂಟ್ರಲ್ ಸ್ಕೂಲ್ ಇದರ ಆಡಳಿತ ಸಮಿತಿಯ ಕಾರ್ಯವೈಖರಿ ಅಭಿನಂದನೀಯ. ಜನಪ್ರಿಯ ಶಾಲೆಯ ಮಕ್ಕಳು ಮುಂದಿನ ದಿನಗಳಲ್ಲಿ ರಾಜ್ಯದ ಹೆಸರನ್ನು ಎತ್ತಿ ಹಿಡಿಯುವಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸಿದರು.
ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್, ಶಾಲಾ ಆಡಳಿತ ಸಮಿತಿಯ ನಿರ್ದೇಶಕ ನೌಶೀನ್ ಬದ್ರಿಯಾ, ಪ್ರಾಂಶುಪಾಲ ಲಿಬಿನ್ ಕ್ಸೇವಿಯರ್ ವೇದಿಕೆಯಲ್ಲಿ ಉಪಸ್ಥಿತರರಿದ್ದರು.
ಇದೇ ವೇಳೆ ಗೋಪಾಲಕೃಷ್ಣ ನೇರಳಕಟ್ಟೆ ರವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳು ಕನ್ನಡ ನಾಡು ನುಡಿಗೆ ಸಂಬಂಧಿಸಿದ ಭಾಷಣ, ಹಾಡು, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ನಡೆಸಿಕೊಟ್ಟರು. ಹಲವು ಕನ್ನಡ ಕವಿಗಳ, ಹೋರಾಟಗಾರರ ವೇಷ ಧರಿಸಿದ ಮಕ್ಕಳ ಛದ್ಮವೇಶವು ಪ್ರಮುಖ ಆಕರ್ಷಣೆಯಾಗಿತ್ತು. ವಿದ್ಯಾರ್ಥಿಗಳು ನಡೆಸಿಕೊಟ್ಟ ಲಾವಣಿ ಮತ್ತು ಏಕ ಪಾತ್ರಾಭಿನಯವು ಎಲ್ಲರ ಗಮನ ಸೆಳೆಯಿತು.
ವಿದ್ಯಾರ್ಥಿಗಳಾದ ಆಸಿಯಾ ಅರ್ಫಾ ಸ್ವಾಗತಿಸಿ ಸ್ವನಿಹ ವಂದಿಸಿದರು. ಫಾಝಿಲ್ ಮತ್ತು ನಿಶಾಂತ್ ಕಾರ್ಯಕ್ರಮ ನಿರೂಪಿಸಿದರು.