ವಿಟ್ಲ:ಶ್ರೀ ಶಾರದಾಂಬ ಭಜನಾ ಮಂಡಳಿ ಆಶೋಕನಗರ, ಅಳಕೆಮಜಲು, ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ ಇದರ ನೇತೃತ್ವದಲ್ಲಿ, ಕಿಸಾನ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಅಳಕೆಮಜಲು, ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂಡಳಿಯ ವಠಾರದಲ್ಲಿ ನ.10ರಂದು
ಉಚಿತ ವೈದ್ಯಕೀಯ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.
ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.೦೦ರ ತನಕ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ವಿಭಾಗ, ನೇತ್ರಾ ತಪಾಸಣೆ, ಮಕ್ಕಳ ತಜ್ಞರು, ಇಸಿಜಿ, ದಂತ ತಪಾಸಣೆ ಮತ್ತು ಚಿಕಿತ್ಸೆ, ಎಲುಬು ಮತ್ತು ಮೂಳೆ ತಜ್ಞರು, ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ದಂತ ವೈದ್ಯಕೀಯ ವಿಭಾಗದ ಸೇವೆಗಳಾದ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚಿಕರಣ, ದಂತಕುಳಿ ತುಂಬಿಸುವುದು, ಹಲ್ಲು ಕೀಳುವುದು ಮೊದಲಾದ ಸೇವೆಗಳು ಲಭ್ಯವಿದೆ. ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆಯಬಹುದೆಂದು ಪ್ರಕಟಣೆ ತಿಳಿಸಿದೆ.