





ಪುತ್ತೂರು: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಅವರ ವಾಹನದ ಮೇಲೆ ಕಿಡಿಗೇಡಿಗಳು ದಾಳಿ ಮಾಡಿರುವುದನ್ನು ಖಂಡಿಸಿದ ವಿಶ್ವಹಿಂದೂ ಪರಿಷತ್ ನಿಯೋಗ ನ.8ರಂದು ಶ್ರೀ ಮಠಕ್ಕೆ ತೆರಳಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.


ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಉಪಾಧ್ಯಕ್ಷ ಯ. ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಘಟನೆಯ ಬಗ್ಗೆ ಪೂರ್ಣ ಮಾಹಿತಿ ಪಡೆದು, ಇಂತಹ ಘಟನೆಯ ಮರುಕಳಿಸದಂತೆ ಕೇರಳ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕೆಂದು ವಿಹಿಂಪದಿಂದ ಆಗ್ರಹಿಸುವುದಾಗಿ ತಿಳಿಸಿದ್ದಾರೆ.














