





ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನಾಧರಿಸಿ ಸಂಪ್ಯ ಪೋಲೀಸರು ಈಶ್ವರಮಂಗಲ ಹೊರಠಾಣಾ ಪೊಲೀಸರು ಈಶ್ವರಮಂಗಲದ ಬೆಳ್ಳಿಚೆಡವಿನಲ್ಲಿ ಕಾರ್ಯಾಚರಣೆ ನಡೆಸಿ ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಬೆಳಗಿನ ಜಾವ, ಪುತ್ತೂರಿನಿಂದ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದಲ್ಲಿ ಎರಡು ದನ, ಎರಡು ಹೋರಿ, ಒಂದು ಕರು ಇತ್ತೇನಲಾಗಿದ್ದು, ಇದರಲ್ಲಿ ಕರು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.












