ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮಕ್ಕಳ ಪ್ರತಿಭೆಯ ಅನಾವರಣ : ಆರ್ಟ್ ಫೆಸ್ಟ್ ಕಾರ್ಯಕ್ರಮ

0

ಉಪ್ಪಿನಂಗಡಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದಲ್ಲ ಒಂದು ಸುಪ್ತ ಪ್ರತಿಭೆಯನ್ನು ಹೊಂದಿರುತ್ತಾರೆ. ಅಂತಹ ಪ್ರತಿಭೆಗಳನ್ನು ಅನಾವರಣಗೊಳಿಸಲು ಬೇಕಾದ ವೇದಿಕೆಯನ್ನು ಒದಗಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ನವೆಂಬರ್ 8 ಹಾಗೂ 9 ರಂದು ಆರ್ಟ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದೀಪ ಬೆಳಗಿಸಿ, ಆರ್ಟ್ ಫೆಸ್ಟ್ ಫಲಕವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ| ಗೋವಿಂದ ಪ್ರಸಾದ್ ಕಜೆ ಇವರು ಗೆಲ್ಲುವ ಛಲದೊಂದಿಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೆ ಸೋಲು ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ತಿಳಿಸಿದರು. ನಂತರ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ಸುಬ್ರಮಣ್ಯ ಭಟ್ ಕೆದಿಲ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಂಸ್ಥೆಯ ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಸಂಸ್ಥೆಯ ಸಹಶಿಕ್ಷಕಿಯರಾದ ಅನಿತಾ, ನಿಶ್ಮಿತಾ ಎಂ. ಹಾಗೂ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here