ನೆಲ್ಯಾಡಿ: ಡಿ.20ರಿಂದ ಮಂಡ್ಯದಲ್ಲಿ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ ರಥಕ್ಕೆ ನ.9ರಂದು ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಸ್ವಾಗತ ಕೋರಲಾಯಿತು.
ಕಡಬದಿಂದ ಪೆರಿಯಶಾಂತಿಗೆ ಆಗಮಿಸಿದ ರಥಕ್ಕೆ ಹೂಮಾಲೆ ಸಮರ್ಪಿಸಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ| ಎಂ.ಪಿ ಶ್ರೀನಾಥ್, ಕಡಬ ತಾಲೂಕು ಘಟಕದ ಕೆ.ಸೇಸಪ್ಪ ರೈ, ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಕಡಬ ಕಂದಾಯ ನಿರೀಕ್ಷಕ ಪೃಥ್ವಿರಾಜ್, ಬೆಳ್ತಂಗಡಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ನಿವೃತ್ತ ಮುಖ್ಯಶಿಕ್ಷಕ ವೆಂಕಟರಮಣ ಆರ್, ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.