





ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವವು ನ.14ರಿಂದ 17ರವರೆಗೆ ನಡೆಯಲಿದ್ದು, ಅದರ ಅಂಗವಾಗಿ ದೇವಸ್ಥಾನ ವಠಾರ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಭಕ್ತಾದಿಗಳ ಶ್ರಮದಾನ ನ.10ರಂದು ನಡೆಯಿತು. ಸುಮಾರು ನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರಮದಾನದಲ್ಲಿ ಪಾಲ್ಗೊಂಡರು. ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು, ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಹಲವು ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡರು.










