ಪುತ್ತೂರು: ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ನ.4ರಂದು ಫ್ಯಾಟಿ ಲಿವರ್(ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋಸ್ಕ್ಯಾನ್ ತಪಾಸಣೆ, ಮಧುಮೇಹ ಹಾಗೂ ಲಿವರ್ ಫಂಕ್ಷನ್ ತಪಾಸಣೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.
ಈ ಪರೀಕ್ಷೆಯು ಉಚಿತವಾಗಿದ್ದು ಆಸ್ಪತ್ರೆ ವೈದ್ಯ ಡಾ.ಜೆ.ಸಿ ಅಡಿಗರವರು ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಪುತ್ತೂರು ಸಮುದಾಯ ಸೇವಾ ವಿಭಾಗದ ನಿರ್ದೇಶಕ ರಾಜ್ ಗೋಪಾಲ್ ಬಲ್ಲಾಳ್, ಆಸ್ಪತ್ರೆ ಮ್ಯಾನೇಜರ್ ನೋಯೆಲ್ ಡಿ’ಸೋಜರವರು ಉಪಸ್ಥಿತರಿದ್ದರು.
ಫಲಾನುಭವಿಗಳು..
ಫೈಬ್ರೋಸ್ಕ್ಯಾನ್-47 ಮಂದಿ
ಮಧುಮೇಹ-40 ಮಂದಿ
ಲಿವರ್ ಫಂಕ್ಷನ್-45 ಮಂದಿ
ಕೊಲೆಸ್ಟ್ರಾಲ್-45 ಮಂದಿ