ಕಡಬ: ಬ್ಯಾಂಕ್ ಆಫ್ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಎನ್ ಆರ್‌ಎಲ್‌ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ಕಡಬ, ಗ್ರಾಮ ಪಂಚಾಯತ್ ಕೊಂಬಾರು ಮತ್ತು ಶ್ರೀ ದುರ್ಗಾ ಪರಮೇಶ್ವರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಂಬಾರು ಇದರ ಜಂಟಿ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಹೊಲಿಗೆ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ನ.5ರಂದು ಜರುಗಿತು.
ಅಧ್ಯಕ್ಷತೆ ವಹಿಸಿದ್ದ ಕೊಂಬಾರು ಗ್ರಾ.ಪಂ.ಅಧ್ಯಕ್ಷ ಮಧುಸೂದನ್ ಓ., ಶುಭಹಾರೈಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಶೆಟ್ಟಿಯವರು ಮಾತನಾಡಿ, ಎಲ್ಲಾ ಶಿಬಿರಾರ್ಥಿಗಳು ಸ್ವ ಉದ್ಯೋಗ ಮಾಡಬೇಕು ಎಂದು ಹೇಳಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಜೀವನ್ ಕೊಲ್ಯ ಮಾತನಾಡಿ, ಕಾರ್ಯಾಗಾರದ ನಿಯಮ, ಯೋಜನೆ, ಸ್ವ ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯ ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಕೊಂಬಾರು ಗ್ರಾ.ಪಂ.ಪಿಡಿಒ ರಾಘವೇಂದ್ರ ಗೌಡರವರು ಸಂಜೀವಿನಿ ಯೋಜನೆಯ ಬಗ್ಗೆ ತಿಳಿಸಿದರು.
ಶ್ರೀ ದುರ್ಗಾಪರಮೇಶ್ವರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ದೇವಕಿ, ತರಬೇತುದಾರರಾದ ಮಮತಾ, ಕೃಷಿಯೇತರ ಚಟುವಟಿಕೆ ತಾಲೂಕು ವ್ಯವಸ್ಥಾಪಕಿ ನಳಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ವೇತಾ ನಿರೂಪಿಸಿದರು. ಸಂಜೀವಿನಿ ಒಕ್ಕೂಟದ ಕೃಷಿ ಉದ್ಯೋಗ ಸಖಿ ಸಂಧ್ಯಾ ಸ್ವಾಗತಿಸಿದರು. ಮುಖ್ಯಪುಸ್ತಕ ಬರಹಗಾರರಾದ ಜಯಶ್ರೀ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.