ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಮತ್ತು ಪ್ರಸಾದ್ ನೇತ್ರಾಲಯ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ನ.12ರಂದು ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್ ನಲ್ಲಿನ ಪುತ್ತೂರು ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.
ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ಈ ಕಣ್ಣಿನ ಆಸ್ಪತ್ರೆಯಲ್ಲಿ ಇದೀಗ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು ಈ ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು, ಬಿಪಿಎಲ್ ಕಾರ್ಡ್ ಇರುವ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುವುದು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಮತ್ತು ಶಿಬಿರಕ್ಕೆ ಆಗಮಿಸುವಾಗ ಆಧಾರ್ ಕಾರ್ಡ್ ತಪ್ಪದೇ ತರಬೇಕಾಗಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಡಾ.ಶ್ರೀಪತಿ ರಾವ್, ಕಾರ್ಯದರ್ಶಿ, ದಾಮೋದರ್ ಕೆ, ಸಮುದಾಯ ಸೇವಾ ನಿರ್ದೇಶಕ ರಾಜ್ ಗೋಪಾಲ್ ಬಲ್ಲಾಳ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲು ಹೆಸರನ್ನು ನೋಂದಾಯಿಸಿದ 30 ಮಂದಿ ಫಲಾನುಭವಿಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.