ಪುತ್ತೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರು ಸ್ಥಾಪಿಸಿದ ಶತಮಾನವನ್ನು ಪೂರೈಸಿರುವ ಪುತ್ತೂರಿನ ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ನ ನೂತನ ವಿಟ್ಲ ಶಾಖೆಯ ಉದ್ಘಾಟನೆಯು ನ.14ರಂದು ನಡೆಯಲಿದೆ.
ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಕೋ ಓಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಎನ್.ಕಿಶೋರ್ ಕೊಳತ್ತಾಯ ಅವರು ಮಾತನಾಡಿ ವಿಟ್ಲದ ಎಂಪೈರ್ ಮಾಲ್ನ ಪ್ರಥಮ ಮಹಡಿಯಲ್ಲಿ ಶಾಖೆ ಉದ್ಘಾಟನೆಗೊಳ್ಳಲಿದ್ದು, ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅವರು ಗಣಕ ಯಂತ್ರ ಉದ್ಘಾಟಿಸಲಿದ್ದಾರೆ. ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಅವರು ಪ್ರಥಮ ಠೇವಣಿ ಪತ್ರ ಹಸ್ತಾಂತರಿಸಲಿದ್ದಾರೆ.ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ವಿಟ್ಲ ಪಟ್ಟಣ ಪಂಚಾಯತ್ನ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ವಿಟ್ಲ ಅರಮನೆ ಮತ್ತು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಬಂಗಾರು ಅರಸು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ರಮೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್ನ ಉಪಾಧ್ಯಕ್ಷ ಕುಡ್ಗಿ ವಿಶ್ವಾಸ್ ಶೆಣೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ, ನಿರ್ದೇಶಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ, ಕಿರಣ್ ಬಲ್ನಾಡು ಉಪಸ್ಥಿತರಿದ್ದರು.