ಬನ್ನೂರು ಹಿ.ಪ್ರಾ. ಶಾಲೆಯಲ್ಲಿ ಮನೆ ನಿರ್ವಹಣೆಯಲ್ಲಿ ನೈಪುಣ್ಯತೆ ಮತ್ತು ಕಲಾತ್ಮಕತೆ ಕುರಿತು ಉಪನ್ಯಾಸ

0

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಪುತ್ತೂರು ಒಕ್ಕೂಟದ ಸಹಭಾಗಿತ್ವದಲ್ಲಿ ಬನ್ನೂರು ದ. ಕ. ಜಿ. ಪ. ಹಿ. ಪ್ರಾ. ಶಾಲೆಯಲ್ಲಿ ಯುವ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಮನೆ ನಿರ್ವಹಣೆಯಲ್ಲಿ ನೈಪುಣ್ಯತೆ ಮತ್ತು ಕಲಾತ್ಮಕತೆ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ನ.11ರಂದು ನಡೆಯಿತು.


ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಉಪನ್ಯಾಸಕ ವಿಷ್ಣುಪ್ರದೀಪ ಎನ್. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಉಪನ್ಯಾಸ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಲೆಕ್ಕ ಪರಿಶೋಧಕರಾದ ಕು.ಲತಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.


ಸ್ವಸಹಾಯ ಸಂಘದ ಉಪಾಧ್ಯಕ್ಷರಾದ ರವಿಚಂದ್ರ ಗೌಡ ಹಾಗೂ ಸಂಘದ ಜೊತೆ ಕಾರ್ಯದರ್ಶಿಯಾದ ಚಂದ್ರಕಲಾ ಇವರು ಉಪಸ್ಥಿತರಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಕು. ವೀಕ್ಷಾ. ಎಸ್ (ತಂಡದ ನಾಯಕಿ), ಅಭಿರಾಮ ಶರ್ಮ (ತಂಡದ ಮೇಲ್ವಿಚಾರಕರು), ಕು.ಸ್ವರ್ಣಶ್ರೀ, ಕು.ವರ್ಷ. ಬಿ, ರಮೇಶ್, ವಲೇಶ್ ನಾಯಕ್ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here