ಅರಿಯಡ್ಕ: ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡ್ನೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ನೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ ಎಸ್.ಟಿ.ಮೋರ್ಛದ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಸದಸ್ಯತಾ ಅಭಿಯಾನದ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಗ್ರಾಮಾಂತರ ಮಂಡಲದ ಕೋಶಾಧಿಕಾರಿ ನಹುಷ ಭಟ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ರಾದ ಯತೀಂದ್ರ ಕೊಚ್ಚಿ ಮತ್ತು ಚಿತ್ರಾ ಪ್ರಸಾದ್ ರೈ ಅಂಕೊತ್ತಿಮಾರು, ತಾಲೂಕು ಎಸ್.ಸಿ ಮೋರ್ಚಾದ ಅಧ್ಯಕ್ಷ ರೋಹಿತ್ ಕಾವು, ನೆಟ್ಟಣಿಗೆ ಮೂಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ,ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಸದಸ್ಯರಾದ ಲೋಕೇಶ್ ಚಾಕೋಟೆ, ಹರೀಶ್ ರೈ ಜಾರತ್ತಾರು, ರಾಜೇಶ್ ಮಣಿಯಾಣಿ ತ್ಯಾಗ ರಾಜೆ, ನಾರಾಯಣ ನಾಯ್ಕ ಚಾಕೋಟೆ,ಸೌಮ್ಯ ಬಾಲಸುಬ್ರಹ್ಮಣ್ಯ, ಭಾರತಿ ವಸಂತ್ ಕೌಡಿಚ್ಚಾರು, ಅನಿತಾ ಆಚಾರಿ ಮೂಲೆ,ರೇಣುಕಾ ಸತೀಶ್ ಕರ್ಕೆರ, ಮತ್ತು ಉಷಾ ರೇಖಾ ರೈ ಕೊಳ್ಳಾಜೆ, ಮಾಡ್ನೂರು ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಆಚಾರ್ಯ ಕಾವು, ಅರಿಯಡ್ಕ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಸಚಿನ್ ಪಾಪೆ ಮಜಲು, ವಿಶ್ವನಾಥ ಕುಲಾಲ್ ಪುತ್ತೂರು, ಜಿಲ್ಲಾ ಪ್ರ.ಶಿಕ್ಷಣ ಪ್ರಕೋಷ್ಠದ ಸದಸ್ಯ ತಿಲಕ್ ರೈ ಕುತ್ಯಾಡಿ, ಪ್ರಜ್ವಲ್ ಕೆರೆ ಮಾರು, ಗಣೇಶ್ ಪೂವಂದೂರು, ಉಮೇಶ್ ಮಾಡ್ನೂರು ಮತ್ತೀತರರು ಉಪಸ್ಥಿತರಿದ್ದರು.