ಸವಣೂರು: ದ.ಕ.ಜಿ.ಪ.ಹಿ.ಪ್ರಾ.ಶಾಲೆ ಸವಣೂರು ಮೊಗರು ಇಲ್ಲಿ ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ 2.5NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ)ವಿಭಾಗ ಇವರ ಜಂಟಿ ಆಶ್ರಯದಲ್ಲಿ “ಕಣ್ಣಿನ ಉಚಿತ ತಪಾಸಣಾ ಶಿಬಿರ ನ.9ರಂದು ನಡೆಯಿತು.
ಗ್ರಾಮ ಪಂಚಾಯತ್ ಸದಸ್ಯೆ ಚೆನ್ನು ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕಣ್ಣಿನ ಶಿಬಿರದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸವಣೂರು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಜಯಂತ್ ವೈ ಕಣ್ಣಿನ ಮಹತ್ವದ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನ್ಯೂ ವಿಷನ್ ನ ರಾಮಚಂದ್ರ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ, ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯ ಗುರುಗಳಾದ ಜುಸ್ತಿನಾ ಲಿಡ್ವಿನ್ ಡಿಸೋಜ ಕಾರ್ಯಕ್ರಮಕ್ಕೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರು, ವಿದ್ಯಾರ್ಥಿಗಳು ಪೋಷಕರು,ಅಡುಗೆ ಸಿಬ್ಬಂದಿಗಳು ಸೇರಿ ಸರಿಸುಮಾರು 161ಜನ ಶಿಬಿರದ ಪ್ರಯೋಜನ ಪಡೆದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರು ಪಂಚಾಯತ್ ಸದಸ್ಯರು, ಕಾಣಿಯೂರು ಹಾಗೂ ಸವಣೂರು ಕ್ಲಸ್ಟರ್ ಶಿಕ್ಷಕ ವೃಂದದವರು, ಪೋಷಕರು ಶಾಲಾ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಪಾಲ್ಗೊಂಡರು, ಕಾರ್ಯಕ್ರಮಕ್ಕೆ ಮೋಕ್ಷ ಬಳಗದವರು ಪ್ರಾರ್ಥಿಸಿದರು, ಸಹಶಿಕ್ಷಕಿ ಜಾನಕಿ ವಂದಿಸಿದರು. ಶಿಕ್ಷಕಿ ದಯಾಮಣಿ. ಕೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಗುಲ್ಸನ್ ಕೌಸರ್ ಸಹಕರಿಸಿದರು.