ರೋಟರಿ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ, ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್ ಪುತ್ತೂರು, ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಪುತ್ತೂರು, ಇನ್ನರ್ ವೀಲ್ ಕ್ಲಬ್ ಪುತ್ತೂರು, ರೋಟರ‍್ಯಾಕ್ಟ್ ಕ್ಲಬ್ ಪುತ್ತೂರು, ರೋಟರ‍್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜು ಪುತ್ತೂರು, ಹಾಸ್ಟಿಟಲ್ ಅಸೋಸಿಯೇಷನ್ ಪುತ್ತೂರು, ಡಾಕ್ಟಸ್ಸ್ ಪೋರಮ್ ಪುತ್ತೂರು,
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪುತ್ತೂರು ಇವುಗಳ ಸಹಯೋಗದಲ್ಲಿ “ವಿಶ್ವ ಮಧುಮೇಹ ದಿನಾಚರಣೆ” ಪ್ರಯುಕ್ತ ವಾಕಥಾನ್ – ಜಾಗೃತಿ ಜಾಥಾ ಮತ್ತು ಪ್ರೊಜೆಕ್ಟ್ ಸ್ವೀಟ್ ಚೈಲ್ಡ್ ಮಕ್ಕಳ ಸಮ್ಮಿಲನ ಕಾರ್ಯಕ್ರಮ ನ.14 ರಂದು ಜರಗಲಿರುವುದು. ಬೆಳಿಗ್ಗೆ ಕೆ.ಎಸ್.ಆರ್‌ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜಾಥಾ ಉದ್ಘಾಟನೆ ನೆರವೇರಲಿರುವುದು.
ಪುತ್ತೂರು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಅಧ್ಯಕ್ಷ ಡಾ.ನರಸಿಂಹ ಶರ್ಮ ಕಾನಾವುರವರು ಜಾಥಾವನ್ನು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಜಾಥಾವು ಕೆ.ಎಸ್.ಆರ್.ಟಿಸಿ ಬಸ್ಸು ನಿಲ್ದಾಣದಿಂದ ಹೊರಟು ಬೊಳುವಾರು ಪ್ರಗತಿ ಆಸ್ಪತ್ರೆ ತನಕ ಸಾಗಲಿರುವುದು.
ಬಳಿಕ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಸಭಾ ಭವನದಲ್ಲಿ ಸಭಾ ಕಾರ್ಯಕ್ರಮ ಜರಗಲಿದ್ದು ಮುಖ್ಯ ಅತಿಥಿಯಾಗಿ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಗೌರವ ಉಪಸ್ಥಿತಿಯಾಗಿ ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ. ದೀಪಕ್ ರೈರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಡಾ.ಶ್ರೀಪತಿ ರಾವ್, ಕಾರ್ಯದರ್ಶಿ ದಾಮೋದರ್ ಕೆ, ಸಮುದಾಯ ಸೇವಾ ವಿಭಾಗದ ನಿರ್ದೇಶಕ ರಾಜ್ ಗೋಪಾಲ್ ಬಲ್ಲಾಳ್, ಕಾರ್ಯಕ್ರಮದ ಸಂಯೋಜಕ ಕಲ್ಲಾರೆ ಡಾ.ನಝೀರ್ಸ್ ಡಯಾಬಿಟಿಸ್ ಸೆಂಟರ್ ನ ಡಾ. ನಝೀರ್ ಅಹಮ್ಮದ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಕಥಾನ್ ಜಾಥದಲ್ಲಿ ಭಾಗವಹಿಸುವವರು ಮುಂಚಿತವಾಗಿ ಹೆಸರು ನೋಂದಾಯಿಸಿ, ಟೀ ಶರ್ಟ್‌ನ್ನು ಉಚಿತವಾಗಿ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ 9481451929 ನಂಬರಿಗೆ ಸಂಪರ್ಕಿಸಬಹುದು. ಲಘು ಉಪಾಹಾರದ ವ್ಯವಸ್ಥೆ ಇರುತ್ತದೆ.