ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುವ ಪ್ರತಿಭಟನೆಗೆ ಕಡಬ ವಲಯ ಹವ್ಯಕ ಪ್ರತಿನಿಧಿ ಪರಿಷತ್ ಬೆಂಬಲ

0

ಕಡಬ: ಕಸ್ತೂರಿರಂಗನ್ ವರದಿ ವಿರೋಧಿಸಿ ನ.15ರಂದು ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಗೆ ಕಡಬ ವಲಯ ಹವ್ಯಕ ಪ್ರತಿನಿಧಿ ಪರಿಷತ್ ಸಂಪೂರ್ಣ ಬೆಂಬಲ ಘೋಷಿಸಿದ್ದು ಪ್ರತಿಯೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕಡಬ ವಲಯ ಹವ್ಯಕ ಪ್ರತಿನಿಧಿ ಪರಿಷತ್‌ನ ಅಧ್ಯಕ್ಷ ಗೋಪಾಲಕೃಷ್ಣ ಬಿ. ಅವರು ಕರೆ ನೀಡಿದ್ದಾರೆ.

ಜನವಿರೋಧಿ ನೀತಿಗಳ ವಿರುದ್ದ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ನೆಲೆಯನ್ನು ಕಳೆದುಕೊಳ್ಳಬೇಕಾಗುತ್ತದೆ, ಈ ನಿಟ್ಟಿನಲ್ಲಿ ಪ್ರತಿಭಟನೆ ಅನಿವಾರ್ಯ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here