94ಸಿ ಹಕ್ಕು ಪತ್ರ ವಿಚಾರ ಮಾತುಕತೆ ನಡೆಯುತ್ತಿದ್ದ ವೇಳೆ ನಡೆದ ಘಟನೆ
ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ತಡವಾದ ವಿಚಾರವಾಗಿ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಮಾತುಕತೆ ನಡೆಯುತ್ತಿದ್ದ ವೇಳೆ ಆರ್.ಐ. ಹಾಗೂ ವ್ಯಕ್ತಿಯೋರ್ವರ ಮಧ್ಯೆ ಮಾತಿಗೆ ಮಾತು ಬೆಳೆದು ಇಬ್ಬರು ಮೇಜಿಗೆ ಕೈ ಬಡಿದ ವೇಳೆ ಗಾಜು ಪುಡಿಯಾದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ.
ವೀರಕಂಬ ನಿವಾಸಿ ಶೇಖ್ ಶಿಬಾನ್ ಎಂಬರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು. ಅಡಿಸ್ಥಳವನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ 94ಸಿ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಕಂದಾಯ ಅಧಿಕಾರಿಗಳು ಸ್ಥಳ ತನಿಖೆಯನ್ನು ನಡೆಸಿ ವರದಿ ಸಲ್ಲಿಸುವ ಸಂದರ್ಭದಲ್ಲಿ ಮನೆ ಅರಣ್ಯ ಇಲಾಖೆಯಿಂದ ನಿಽಷ್ಟ ದೂರದಲ್ಲಿದ್ದು, ಅಲ್ಲಿಂದ ಅಭಿಪ್ರಾಯ ಪಡೆಯುವ ಬಗ್ಗೆ ಪತ್ರ ಬರೆದಿದ್ದಾರೆ.
ಇದೇ ವಿಚಾರಕ್ಕೆ ಸಂಬಂಽಸಿದಂತೆ ಬಿಜೆಪಿ ಮುಖಂಡ ಮಾಧವ ಮಾವೆ ರವರು ಅಽಕಾರಿಗಳ ಜತೆಗೆ ಮಾಹಿತಿ ತಿಳಿದುಕೊಳ್ಳುವ ನಿಟ್ಟಿನಲ್ಲಿ ವಿಟ್ಲದ ಅರ್ ಐ ಕಛೇರಿಗೆ ಆಗಮಿಸಿದ್ದರು. ಮಾತುಕತೆ ವೇಳೆ ಹೊರಭಾಗದಿಂದ ಬಂದಿದ್ದ ವ್ಯಕ್ತಿ ಹಾಗೂ ಆರ್ ಐ ಮಧ್ಯೆ ಮಾತಿಗೆ ಮಾತು ಬೆಳೆದಿದ್ದು, ಈ ವೇಳೆ ಇಬ್ಬರೂ ಮೇಜಿಗೆ ಕೈ ಬಡಿದಿದ್ದು ಮೇಜಿನ ಮೇಲಿನ ಗಾಜು ಒಡೆದು ಹೋಗಿದೆ ಎನ್ನಲಾಗಿದೆ.
ಘಟನೆ ನಡೆದ ಕೂಡಲೇ ಆರ್.ಐ. ರವರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.