ರಾಮಕುಂಜ: ಶ್ರೀ ರಾಮಕುಂಜೇಶ್ವರ ವಸತಿ ನಿಲಯದಲ್ಲಿ ’ಸಂಸ್ಕಾರ ಕುಂಜ’ ಮಾಲಿಕೆ -4 ವಿಶೇಷ ಉಪನ್ಯಾಸ ಕಾರ್ಯಕ್ರಮ ನ.10ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಮಂಗಳೂರಿನ ಮ್ಯಾಪ್ಸ್ ಕಾಲೇಜಿನ ಎಚ್ಓಡಿ ಪ್ರಶಾಂತ್ ಅಲಿಸನ್ ಅವರು ವಿದ್ಯಾರ್ಥಿಗಳು ಒತ್ತಡವನ್ನು ನಿಭಾಯಿಸುವ ಬಗ್ಗೆ ಹೇಗೆ ಮತ್ತು ವ್ಯಕ್ತಿತ್ವ ವಿಕಸನ ಬಗ್ಗೆ ವಿದ್ಯಾರ್ಥಿಗಳಿಗೆ ಚಟುವಟಿಕೆ ಮೂಲಕ ಮಾರ್ಗದರ್ಶನ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಮಾತನಾಡಿ, ವಿದ್ಯಾರ್ಥಿಗಳೆಲ್ಲರೂ ಮಾನಸಿಕವಾಗಿ ಸದೃಢರಾದಾಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ಸಿಬಿಎಸ್ಸಿ ಪ್ರಾಂಶುಪಾಲ ಪ್ರವೀದ್, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಉಪಸ್ಥಿತರಿದ್ದರು. ಶಿಕ್ಷಕ ಕಿಶೋರ್ ಕುಮಾರ್ ಬಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.