ಬೆಟ್ಟಂಪಾಡಿ ಪ್ರಿಯದರ್ಶಿನಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಪ್ರಿಯದರ್ಶಿನಿಗೊಲಿದ ಕಿರಿಯ ಸಮಗ್ರ

0

ಬೆಟ್ಟಂಪಾಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.11ರಂದು ನಡೆಯಿತು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ವಿಷ್ಣು ಪ್ರಸಾದ್ ಮಾತನಾಡಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪ್ರತಿಭಾಕಾರಂಜಿಯಿಂದ ಸಾಧ್ಯವಾಗುತ್ತಿದೆ. ಬಾಲ್ಯದಲ್ಲಿ ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ ಸಿಕ್ಕಿದಾಗ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕೆ ದೀಪ ಬೆಳಗಿಸಿ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಕಕ್ಕೂರು ಶಾಲೆಯ ನಿವೃತ್ತ ಶಿಕ್ಷಕ ವಿಷ್ಣು ಭಟ್ ರವರನ್ನು ಗೌರವಿಸಲಾಯಿತು.

ಪ್ರಿಯದರ್ಶಿನಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ರಂಗನಾಥ ರೈ ಗುತ್ತು ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳಲ್ಲಿ ಇರುವ ಪ್ರತಿಭೆಗಳ ಅನಾವರಣಕ್ಕೆ ಇಂತಹ ಕಾರ್ಯಕ್ರಮ ಸಹಕಾರಿ ಎಂದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸತೀಶ್ ರೈ ಕಟ್ಟಾವು, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾಗೇಶ್ ಪಾಟಾಳಿ, ಪ್ರಿಯದರ್ಶಿನಿ ಶಾಲೆಯ ಮುಖ್ಯ ಶಿಕ್ಷಕ ರಾಜೇಶ್ ಎನ್ ಉಪಸ್ಥಿತರಿದ್ದರು.

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸುಮಾರು 11 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ 15 ಸ್ಪರ್ಧೆಗಳು ಹಾಗೂ ಕಿರಿಯ ಪ್ರಾಥಮಿಕದಲ್ಲಿ 12 ಸ್ಪರ್ಧೆಗಳು ನಡೆದವು. ಕಿರಿಯ ಪ್ರಾಥಮಿಕದಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡರೆ ಹಿರಿಯ ವಿಭಾಗದಲ್ಲಿ ದ.ಕ.ಜಿ.ಪ.ಹಿ.ಪ್ರಾ ಶಾಲೆ ಚೂರಿಪದವಿನ ವಿದ್ಯಾರ್ಥಿಗಳು ಪ್ರಥಮ ಸಮಗ್ರ ಪ್ರಶಸ್ತಿ ಪಡೆದು ತಾಲೂಕು ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಗೊಂಡರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು ಕ್ಲಸ್ಟರ್ ಸಿ ಆರ್ ಪಿ ಪರಮೇಶ್ವರಿ ಪ್ರಸಾದ್ ಸ್ವಾಗತಿಸಿದರು. ಶಿಕ್ಷಕಿ ರಕ್ಷಿತಾ ವಂದಿಸಿದರು. ಶಿಕ್ಷಕಿ ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here