





ಕಡಬ: ನ.15ರಂದು ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ 48 ಗ್ರಾಮಗಳ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ಅನಿವಾರ್ಯ ಎಂದು ರೈತ ಉತ್ಪಾದಕ ಕಂಪೆನಿಯ ನಿರ್ದೆಶಕ ಅಚ್ಯುತ ಗೌಡ ದೇರಾಜೆ ಹೇಳಿದ್ದಾರೆ.
ಇಂದು ನಮ್ಮ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಆದುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸುವುದರ ಮೂಲಕ ನಮ್ಮ ನೋವನ್ನು ಸರಕಾರಕ್ಕೆ ಮುಟ್ಟಿಸಬೇಕಾಗಿದೆ ಆದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.












