ಪುತ್ತೂರು: ಒಳಮೊಗ್ರು ಗ್ರಾಮದ ಮುಂಡೋಮೂಲೆ ಎಂಬಲ್ಲಿ ಸರಕಾರಿ ಭೂಮಿಯನ್ನು ಅತಿಕ್ರಮಣ ಮಾಡಿ ಜೆಸಿಬಿ ಮೂಲಕ ಮಣ್ಣು ಸಮತಟ್ಟು ಮಾಡಲಾಗುತ್ತಿದೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಗ್ರಾಪಂ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ನ.12 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಗ್ರಾಮ ಆಡಳಿತ ಅಧಿಕಾರಿ ಸುಮನ್, ಗ್ರಾಪಂ ಕಾರ್ಯದರ್ಶಿ ಜಯಂತಿ, ಗ್ರಾಪಂ ಸದಸ್ಯ ಮಹೇಶ್ ರೈ ಕೇರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ಅವರ ಜಾಗದ ಬದಿಯಲ್ಲೆ ಜೆಸಿಬಿ ಮೂಲಕ ಮಣ್ಣು ಸಮತಟ್ಟುಗೊಳಿಸುತ್ತಿದ್ದರು ಈ ಬಗ್ಗೆ ಅವರಿಗೆ ಸೂಚನೆ ನೀಡಿದ ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ಸಮತಟ್ಟುಗೊಳಿಸುವ ಬಗ್ಗೆ ಇಲಾಖೆಯಿಂದ ಅರ್ಜಿ ಕೊಟ್ಟು ಅನುಮತಿ ಪಡೆದುಕೊಳ್ಳಬೇಕು ಎಂದು ತಿಳಿಸಿ ಅನುಮತಿ ಬಳಿಕ ಜೆಸಿಬಿ ಕೆಲಸ ಮುಂದುವರಿಸುವಂತೆ ತಿಳಿಸಿದರು.