ನ.14: ಬೆಟ್ಟಂಪಾಡಿಯಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ- ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನೆ, ವಿಚಾರಗೋಷ್ಠಿ

0

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ಸಹಕಾರ ಸಹಭಾಗಿತ್ವದಲ್ಲಿ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಬೆಟ್ಟಂಪಾಡಿ ಇದರ ನೇತೃತ್ವದಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಸಮಾರಂಭ ಹಾಗೂ ಸಹಕಾರ ಸಚಿವಾಲಯ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಇದರ ಬಗ್ಗೆ ವಿಚಾರಗೋಷ್ಠಿ ನ.14 ರಂದು ಬೆಳಿಗ್ಗೆ ಬೆಟ್ಟಂಪಾಡಿಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರೂ ಆಗಿರುವ ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರ ಕುಮಾರ್ ವಹಿಸಲಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮೆರವಣಿಗೆ ಉದ್ಘಾಟನೆಯನ್ನು ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಮಾಡಲಿದ್ದು, ಸಹಕಾರಿ ಯೂನಿಯನ್‌ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತು ಎಸ್.ಬಿ.ಜಯರಾಮ ರೈ ಬಳಜ್ಜ, ಮಂಗಳೂರು ಸ್ಕೇಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ,ಬೆಟ್ಟಂಪಾಡಿ ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಹೆಚ್.ಎನ್, ಪುತ್ತೂರು ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರವೀಣ್ ಕುಮಾರ್ ರೈ ಮೇನಾಲ ಭಾಗವಹಿಸಲಿದ್ದಾರೆ. ಸಹಕಾರ ಸಚಿವಾಲಯ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಇದರ ಬಗ್ಗೆ ವಿಚಾರಗೋಷ್ಠಿಯನ್ನು ಸಂಪನ್ಮೂಲ ವ್ಯಕ್ತಿ ಕೆಪಿಸಿಯಂ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ಬಿಂದು ನಾಯರ್ ನಡೆಸಿಕೊಡಲಿದ್ದಾರೆ.


ಸಹಕಾರಿ ಬಂಧುಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ.ಎಸ್.ರಂಗನಾಥ ರೈ,ಉಪಾಧ್ಯಕ್ಷ ಗಿರೀಶ್ವರ ಭಟ್ ಯಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ರಾಮಯ್ಯ ರೈ, ದ.ಕ.ಜಿ.ಪಂ ಯೂನಿಯನ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಸ್.ವಿ.ಹಿರೇಮಠ ಹಾಗೂ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here