ಕುಂಬ್ರ ಸ್ಪಂದನಾ ಸೇವಾ ಬಳಗದ ವತಿಯಿಂದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಶಿಬಿರಾರ್ಥಿಗಳು ಎ.ಜೆ ಆಸ್ಪತ್ರೆಗೆ ದಾಖಲು

0

ಪುತ್ತೂರು:ಸ್ಪಂದನಾ ಸೇವಾ ಬಳಗ ಕುಂಬ್ರ ಇದರ ಆಶ್ರಯದಲ್ಲಿ, ಎ. ಜೆ. ಇನ್ಸ್ ಟ್ಯೂಷನ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ
ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ನ.10 ರಂದು ಶ್ರೀ ರಾಮ ಭಜನಾ ಮಂದಿರದ ಸಭಾಂಗಣ ಕುಂಬ್ರದಲ್ಲಿ ನಡೆಯಿತು.

ಇದರಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ 18 ಜನರನ್ನು ಗುರುತಿಸಲಾಗಿದ್ದು,8 ಜನರ ಮೊದಲ ತಂಡ ನ.12 ರಂದು ಶ್ರೀ ರಾಮ ಭಜನಾ ಮಂದಿರದ ವಠಾರದಿಂದ ಮಂಗಳೂರು ಎ.ಜೆ ಆಸ್ಪತ್ರೆಗೆ ಬಸ್ಸಿನಲ್ಲಿ ಕಳುಹಿಸಲಾಯಿತು.ಸ್ಪಂದನಾ ಸೇವಾ ಬಳಗ ಕುಂಬ್ರ ಇದರ ಅಧ್ಯಕ್ಷ ರತನ್ ರೈ ಕುಂಬ್ರ, ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಜಾರತ್ತಾರು,ಉಪಾಧ್ಯಕ್ಷ ರಾಜೇಶ್ ರೈ ಪರ್ಪುಂಜ, ಸದಸ್ಯರಾದ ಕೃಷ್ಣ ಕುಮಾರ್ ಇದ್ಯಾಪೆ , ವಿಶ್ವನಾಥ ರೈ ಕೋಡಿಬೈಲು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here