ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಚೆಕ್ ಹಸ್ತಾಂತರ

0

ವಿಟ್ಲ :ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ   ರೂ 2 ಲಕ್ಷ ಮಂಜೂರಾಗಿದ್ದು, ಸದರಿ ಚಕ್ಕನ್ನು  ವಿಟ್ಲ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಗುರು ಶ್ರದ್ಧಾನಾಥಾಜಿ ಮಠಾಧೀಶರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ರಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಯಶವಂತ್ ವಿಟ್ಲ, ಸಮಿತಿಯ ಕಾರ್ಯಾಧ್ಯಕ್ಷರಾದ  ಸುರಕ್ಷಾ ಹೆಲ್ತ್ ಸೆಂಟರ್ ನ  ಡಾ. ಗೀತಾ ಪ್ರಕಾಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ  ಕೃಷ್ಣಯ್ಯ ಬಲ್ಲಾಲ್, ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ನವೀನ್ ಚಂದ್ರ,ವಲಯ ಮೇಲ್ವಿಚಾರಕರಾಕಿ  ಸರಿತಾ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here