ಕಡಬ: ಕುಟ್ರುಪಾಡಿ ಗ್ರಾ.ಪಂ.ನ 3ನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯೆ ಸ್ವಪ್ನಾ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಈ ಹಿನ್ನಲೆಯಲ್ಲಿ ಈಗಾಗಲೇ ಮೂರು ನಾಮಪತ್ರಗಳು ಸಲ್ಲಿಕೆಯಾಗಿದೆ.
ನ.13ರಂದು ನಾಮಪತ್ರ ಪರಿಶೀಲನೆ ನಡೆದಿದ್ದು, ನ.15ರಂದು ನಾಮಪತ್ರ ಹಿಂತೆಗೆಯಲು ಕೊನೆಯ ದಿನಾಂಕವಾಗಿದೆ.
ಈಗಾಗಲೇ ಕಾಂಗ್ರೆಸ್ ಬೆಂಬಲಿತ ವಲ್ಸಮ್ಮ ಎ.ಜೆ. ಹಾಗೂ ಅನ್ನಮ್ಮ ಬಿಜೆಪಿ ಬೆಂಬಲಿತವಾಗಿ ಎಲಿಯಮ್ಮ ಅವರು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿ ಉಪನ್ಯಾಸಕ ಸಲೀನ್ ಕೆ.ಪಿ.ಯವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.