ಪುತ್ತೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು, ದ.ಕ ಜಿಲ್ಲಾ ಸಮಿತಿ ಮಂಗಳೂರು, ಉಪ ಸಮಿತಿ ಪುತ್ತೂರು ಇದರ ವತಿಯಿಂದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪುತ್ತೂರು ಉಪ ಸಮಿತಿಯ ಸ್ಥಾಪಕಾಧ್ಯಕ್ಷರಾದ ಎನ್.ಬಾಲಕೃಷ್ಣ ಕೊಳತ್ತಾಯರವರ 80ನೇ ವರ್ಷದ ಹುಟ್ಟುಹಬ್ಬದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮವು ನ.16 ರಂದು ರೋಟರಿ ಮನೀಷಾ ಸಭಾಭವನದಲ್ಲಿ ಮಧ್ಯಾಹ್ನ ಜರಗಲಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪುತ್ತೂರು ಉಪ ಸಮಿತಿಯ ಅಧ್ಯಕ್ಷ ಮಿತ್ತಳಿಕೆ ಸೂರ್ಯನಾಥ ಆಳ್ವರವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿರವರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮೆಸ್ಕಾಂ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀಮತಿ ಡಿ.ಪದ್ಮಾವತಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷ ಉರ್ಬಾನ್ ಪಿಂಟೊ, ಪುತ್ತೂರು ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ವಾಮನ್ ಪೈರವರು ಭಾಗವಹಿಸಲಿದ್ದಾರೆ ಎಂದು ಸೂರ್ಯನಾಥ ಆಳ್ವರವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಕಾರ್ಯದರ್ಶಿ ಅಶೋಕ್ ಪ್ರಶಾಂತ್, ಕೋಶಾಧಿಕಾರಿ ಸಜಿತ್ ಕುಮಾರ್ ರೈ, ಉಪಾಧ್ಯಕ್ಷ ಕೃಷ್ಣಪ್ರಶಾಂತ್, ಮಾಜಿ ಅಧ್ಯಕ್ಷ ಮಹಾದೇವ ಶಾಸ್ತ್ರಿ ಮಣಿಲರವರು ಉಪಸ್ಥಿತರಿದ್ದರು.