ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳೀಯ ಪದಕವನ್ನು ಗಳಿಸಿಕೊಂಡಿದ್ದಾರೆ.
ಮೂಡಬಿದ್ರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ರಾಮ್ ಜಗದೀಶ್ ಭಂಡಾರಿ 73 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದಾರೆ.
ಇದೇ ಕ್ರೀಡಾಕೂಟದ 61 ಕೆಜಿ ವಿಭಾಗದಲ್ಲಿ ದ್ವಿತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದ ಸ್ಕಂದ ಪ್ರಸಾದ್ ಒಟ್ಟು 151 ಕೆಜಿ ಭಾರವನ್ನು ಎತ್ತಿ ರಜತ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.