ನ.17: ಪ್ರಗತಿ ಸ್ಟಡಿ ಸೆಂಟರ್ ವತಿಯಿಂದ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು

0

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ‍್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ʼಪ್ರಗತಿ ವೈಭವ-2024ʼ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ಸಾಂಸ್ಕೃತಿಕ ಕಾರ್ಯಕ್ರವನ್ನು ಪುತ್ತೂರಿನ ಪುರಭವನದಲ್ಲಿ ನ.17ರಂದು ಆಯೋಜಿಸಲಾಗಿದೆ.

ಕಾರ‍್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ, ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ,ಲಿಟ್ಲಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ , ಅಂಬಿಕಾ ಹಿರಿಯ ಪ್ರಾಥಮಿಕ ಶಾಲೆ , ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ, ಸರಸ್ವತಿ ವಿದ್ಯಾಲಯ ನರಿಮೊಗರು, ಬೆಥನಿ ಪ್ರೌಢಶಾಲೆ, ಅಂಬಿಕಾ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು, ಸೈಂಟ್ ಫಿಲೋಮಿನ ಪದವಿಪೂರ್ವ ಕಾಲೇಜು ದರ್ಬೆ, ಅಂಬಿಕಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಸೇರಿದಂತೆ ಒಟ್ಟು 1000 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆಸಕ್ತ ವಿದ್ಯಾಸಂಸ್ಥೆಯವರು ನ.17ರ ಭಾನುವಾರ ಬೆಳಗ್ಗೆ 9.30ರೊಳಗೆ ಪುತ್ತೂರಿನ ಪುರಭವನದಲ್ಲಿ ಬಂದು ಹೆಸರು ನೋಂದಾಯಿಸಿಕೊಳ್ಳಬಹುದು.

ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಬೆಂಗಳೂರು ಸ್ಕೈಬರ್ಡ್ ಏವಿಯೇಷನ್ ಸಂಸ್ಥೆಯ ಅಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಸುಜಾತ ಬೈರಿ, ಸುದ್ದಿ ಬಿಡುಗಡೆ ಆಡಳಿತ ನಿರ್ದೇಶಕ ಡಾ|ಯು.ಪಿ ಶಿವಾನಂದ, ವಿವೇಕಾನಂದ ಬಿ.ಎಡ್ ಕಾಲೇಜ್ ತೆಂಕಿಲ ಇದರ ಪ್ರಾಂಶುಪಾಲೆ ಶೋಭಿತಾ ಸತೀಶ್ ರಾವ್, ವಿವೇಕಾನಂದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ, ಶಿಕ್ಷಣ ತಜ್ಞೆ- ಪ್ರೇರಕ ಭಾಷಣಗಾರ್ತಿ ವಚನ ಜಯರಾಮ್, ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶ್ರೀ ಪ್ರಗತಿ ಎಜುಕೇಶನ್ ಫೌಂಡೇಶನ್ ಅಧ್ಯಕ್ಷೆ ಹೇಮಾವತಿ ಸುದರ್ಶನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಗೋಕುಲ್‌ನಾಥ್ ಪಿ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here