ಕಾಣಿಯೂರು: ಕೂರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿಣ್ಣರ ಸಂಭ್ರಮ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಆರತಿಯವರು ಉದ್ಘಾಟಿಸಿ ಶುಭಹಾರೈಸಿದರು. ಬೆಳಂದೂರು ಗ್ರಾ. ಪಂ. ಸದಸ್ಯರಾದ ತಾರಾ ಅನ್ಯಾಡಿ, ಗೀತಾ ಕುವೆತ್ತೋಡಿ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ವನಿತಾ ಅನ್ಯಾಡಿ ಶುಭಹಾರೈಸಿದರು. ಪುಟಾಣಿ ಯಶ್ಮಿತಾ ನೆಹರುರವರ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರು, ಮಹಿಳಾ ಮಂಡಲ, ಯುವತಿ ಮಂಡಲದ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ದನ್ವಿಕ್ ಚಾಪಳ್ಳ ಸ್ವಾಗತಿಸಿ, ವಿದ್ವತ್ ಕೆಡೆಂಜಿ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಲಲಿತಾ ಸಹಕರಿಸಿದರು. ಬಳಿಕ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.