ನಿತೇಶ್-ತೃತೀಯ, ಅಭೀಕ್ಷಾಗೆ 4ನೇ ಸ್ಥಾನ
ನೆಲ್ಯಾಡಿ: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಉಪನಿರ್ದೇಶಕರ ಕಚೇರಿ ದ.ಕ.ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ ಇವರ ಸಹಯೋಗದಲ್ಲಿ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದ ಜಂಪ್‌ರೋಪ್ ಸ್ಪರ್ಧೆಯಲ್ಲಿ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿ.ಪ್ರಾ.ಶಾಲಾ 7ನೇ ತರಗತಿ ವಿದ್ಯಾರ್ಥಿಗಳಾದ ಧನ್ಯಶ್ರೀ, ಅದ್ವಿತ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ನಿತೇಶ್ ತೃತೀಯ ಹಾಗೂ ಅಭೀಕ್ಷಾ 4ನೇ ಸ್ಥಾನ ಪಡೆದುಕೊಂಡಿದ್ದಾರೆ. 7ನೇ ತರಗತಿ ವಿದ್ಯಾರ್ಥಿಗಳಾದ ಆಶಿತ್, ಹಿತೇಶ್, ಸಾನ್ವಿ, ಧನ್ಯಶ್ರೀ ಮತ್ತು 6ನೇ ತರಗತಿಯ ವಿದ್ಯಾರ್ಥಿಗಳಾದ ಖುಷಿ ಜೆ.ಎಸ್., ಹನೀಕ್ಷಾ, ಭೂಮಿಕಾ, ಶೋಭಿತ್ ಅವರು ಜಂಪ್‌ರೋಪ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹೇಮೋಧರ ತರಬೇತಿ ನೀಡಿದ್ದರು. ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡ ಹಾಗೂ ಶಿಕ್ಷಕರು ಸಹಕರಿಸಿದ್ದರು.