ಪುತ್ತೂರು: ವೈದೇಹಿ ಮತ್ತು ವೈಷ್ಣವಿ ಮಹಿಳಾ ಭಜನಾ ಮಂಡಳಿ ಬೊಳುವಾರು ಮತ್ತು ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಸಹಯೋಗದೊಂದಿಗೆ ಕನಕ ಜಯಂತಿ ಆಚರಣೆ ಮತ್ತು 12ನೇ ವರ್ಷದ ವಾರ್ಷಿಕೋತ್ಸವ ನ.20ಕ್ಕೆ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.
ವಿವಿಧ ಮಹಿಳಾ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ವಾಧೀಶ ವಿಠಲದಾಸ ರಾಮಕೃಷ್ಣ ಕಾಟುಕುಕ್ಕೆ ಮತ್ತು ವಿದ್ವಾನ್ ನಟರಾಜ ಶರ್ಮರವರಿಂದ ದಾಸ ಸಂಕೀರ್ತನೆ ನಡೆಯಲಿದೆ.
ಮಧ್ಯಾಹ್ನ ಗಂಟೆ 12ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಅವರು ಉದ್ಘಾಟಲಿಸಲಿದ್ದಾರೆ. ಮಧ್ವಾಧೀಶ ವಿಠಲದಾಸ ದಾಸಂಕೀರ್ತನಾಕಾರ ರಾಮಕೃಷ್ಣ ಕಾಟುಕುಕ್ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ, ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.