ಪುತ್ತೂರಿನಲ್ಲಿ ದ.ಕ.ಜಿಲ್ಲಾ ಮಟ್ಟದ ಜೇನು ಕೃಷಿಕರ ಸಮ್ಮಿಲನ

0

ಪುತ್ತೂರು: ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರು ಬೀರಮಲೆ ಬೆಟ್ಟದ ಗಾಂಧೀ ಮಂಟಪದಲ್ಲಿ ನ.18ರಂದು ನಡೆಯಿತು.


ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆ ಅಧ್ಯಕ್ಷ ಜಗಜೀವನ್ ದಾಸ್ ರೈ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮಜನ್ಯ ಸಂಸ್ಥೆಯ ಅಧ್ಯಕ್ಷ ಮೂಲಚಂದ್ರ ಕುಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಸುಳ್ಯ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ವೀರಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮ್ಮಿಲನ ಕಾರ್ಯಕ್ರಮದಲ್ಲಿ ನಡೆದ ಚಿಂತನ-ಮಂಥನದಲ್ಲಿ ಜೇನು ಕೃಷಿಕರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳು, ಮಾರುಕಟ್ಟೆ, ಜೇನಿಗೆ ನಿರ್ಧಿಷ್ಟ ಬೆಲೆ ನಿಗದಿಪಡಿಸುವುದು, ಜೇನು ಮತ್ತು ಜೇನಿನ ಮೌಲ್ಯವರ್ಧನೆ, ಜೇನಿನ ಔಷಧೀಯ ಗುಣಗಳು, ಸ್ಥಳಾಂತರ ಜೇನು ಕೃಷಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಕರಾವಳಿಯ ಜೇನಿಗೆ ತನ್ನದೇ ಆದ ವಿಶಿಷ್ಟ ವಿಶೇಷಗಳಿದ್ದು ಅದಕ್ಕೆ ಒಂದು ನಿರ್ದಿಷ್ಟ ಬ್ರಾಂಡ್ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಥೆಯ ನಿರ್ದೇಶಕ ರಾಮ ಪ್ರತೀಕ್ ಕರಿಯಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕ ನಿರಂಜನ್ ಪೋಳ್ಯ ಕಾರ್ಯಾಗಾರ ನಿರ್ವಹಿಸಿದರು. ನಿರ್ದೇಶಕರಾದ ಶ್ರೀನಂದನ ಕುಂಞಿಹಿತ್ಲು ವಂದಿಸಿದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಸುವರ್ಣ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕರಾದ ಶ್ರೀಹರ್ಷ ಎಕ್ಕಡ್ಕ, ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಸಂಸ್ಥೆಯ ಸದಸ್ಯರುಗಳು ಉಪಸ್ಥಿತರಿದ್ದರು. 50ಕ್ಕೂ ಅಧಿಕ ಆಹ್ವಾನಿತ ಜೇನು ಕೃಷಿಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here