ಪುತ್ತೂರು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ವತಿಯಿಂದ ನ.24ರಂದು ನಡೆಯಬೇಕಾಗಿದ್ದ 7ನೇ ವರ್ಷದ ಕೆಸರುಡೊಂಜಿ ದಿನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಸಂಘಟನೆಯ ಕ್ರೀಡಾ ಕಾರ್ಯದರ್ಶಿಯಾಗಿದ್ದ ಜಗದೀಶ್ ಕೋಡಿಯಡ್ಕರವರು ಸಾವನ್ನಪ್ಪಿರುವುದರಿಂದ ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಕೋರುವ ಹಿನ್ನೆಲೆಯಲ್ಲಿ ಸಂಘಟನೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ಕೆಸರುಡೊಂಜಿ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಲಕ್ಕಿಕೂಪನ್ ಡ್ರಾವನ್ನು ಕೂಡ ಮುಂದಿನ ದಿನಗಳಲ್ಲಿ ಮಾಡಲಾಗುವುದು. ಸಾರ್ವಜನಿಕರು ಸಹಕರಿಸುವಂತೆ ಶ್ರೀ ವಿಷ್ಣು ಯುವಶಕ್ತಿ ಬಳಗದ ಸಂಘಟಕ ರಾಜೇಶ್ ಕೆ.ಮಯೂರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.