ಶಿಕ್ಷಕನಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ನಿಂದನೆ ಆರೋಪ-ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಇಒಗೆ ದೂರು

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕನೋರ್ವ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ನಿಂದಿಸಿ ಪೋಸ್ಟ್ ಹಾಕಿದ್ದು ಆತನ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಪಾಪೆಮಜಲು ಪ್ರೌಡಶಾಲೆಯ ಶಿಕ್ಷಕರಾದ ಹರಿಪ್ರಸಾದ್ ರವರು ಸರಕಾರಿ ಉದ್ಯೋಗಿಯಾಗಿದ್ದು,ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಗಳನ್ನು ಅಪಹಾಸ್ಯ ಮಾಡುವ ಸಲುವಾಗಿ ವಾಟ್ಸಪ್ ಸ್ಟೇಟಸ್ ಹಾಕಿದ್ದು, ಇದು ಕಾನೂನಿನ ವಿರುದ್ಧವಾಗಿದ್ದು ಇವರ ಮೇಲೆ ಕಾನೂನು ಕ್ರಮ ಕೈಗೊಂಡು ಕೆಲಸದಿಂದ ಅಮಾನತು ಮಾಡಬೇಕೆಂದು ಕೋರುತ್ತಿದ್ದೇನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಿದ ದೂರಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here