ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ INFOTSAV 2K24

0


ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ INFOTSAV 2024 ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ. ಸೀತಾರಾಮ ರೈ ಯವರು ವಿದ್ಯಾರ್ಥಿಗಳಲ್ಲಿ ಸೂಕ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ಧೇಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭವನ್ನು ಹಾರೈಸಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ MIT ಮೂಡಬಿದ್ರೆಯ ಎಂಸಿ.ಎ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ರಾಜೇಶ್ ರಾಜು ರವರು ಈ ರೀತಿಯ ಫೆಸ್ಟ್ ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಹಲವು ವಿಷಯಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಕಲಿತ ವಿಷಯವನ್ನು ಹೇಗೆ ಮತ್ತು ಎಲ್ಲಿ ಅಳವಡಿಸಿಕೊಳ್ಳಬಹುದು
ಎಂಬುದನ್ನು ಅರಿತುಕೊಳ್ಳಲು ಸಾಧ್ಯ ಎಂದರು.


ಅತಿಥಿಗಳ ಪರಿಚಯವನ್ನು ಕಾರ್ಯಕ್ರಮದ ಸಂಘಟಕರು ಹಾಗೂ ಬಿ.ಸಿ.ಎ ವಿಭಾಗದ ಮುಖ್ಯಸ್ಥರಾದ ಪ್ರತಿಭಾ ಭಟ್ ರವರು ಮಾಡಿಕೊಟ್ಟರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾರಾಯಣ ಮೂರ್ತಿ ಕೆ. ಅವರು ಪಠ್ಯ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ಕೊಡುವ ಸಂಸ್ಥೆ ನಮ್ಮದಾಗಿದ್ದು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.


ವೇದಿಕೆಯಲ್ಲಿ ಸಂಸ್ಥೆಯ ಉಪಪ್ರಾಂಶುಪಾಲರಾದ ಶೇಷಗಿರಿ ಎಂ, ವಿದ್ಯಾರಶ್ಮಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ ಕೇವಳ ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಶಶಿಕಲಾ ಆಳ್ವ, ವಿದ್ಯಾರ್ಥಿ ಸಂಘಟಕರಾದ ಅಸ್ಮಿತ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಕುಶಿತಾ ಸ್ವಾಗತಿಸಿ ಪ್ರಥಮ ಬಿ.ಸಿ.ಎ ವಿದ್ಯಾರ್ಥಿನಿ ಸಫ್ರೀನಾ ವಂದಿಸಿದರು. ಮಹಮ್ಮದ್ ಸುಫ಼ೈದ್ ಕಾರ್ಯಕ್ರಮದ ನಿರೂಪಣೆಗೈದರು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.

LEAVE A REPLY

Please enter your comment!
Please enter your name here