ಆಲಂಕಾರು:ಆಲಂಕಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರಿನಲ್ಲಿ ನಡೆಯಿತು. ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆ ಉದ್ಘಾಟಿಸಿ ಶುಭಾಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ , ಎಸ್ ಡಿ ಎಂ ಸಿ ಅಧ್ಯಕ್ಷ ಸುಂದರ ಎ. ಬಿ ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಪೂಜಾರಿ.ಕೆ
,ಸಿ.ಆರ್.ಪಿ ಪ್ರಕಾಶ್ ಬಾಕಿಲ, ಅಲಂಕಾರು ಆದಿತ್ಯ ಕ್ಲಿನಿಕ್ ನ ಡಾ. ಆಕಾಶ್,ಗ್ರಾ.ಪಂ ಸದಸ್ಯೆ ರೂಪ ಶ್ರೀ ಪಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ನಡುಮಣೆ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪ್ರಮೀಳಾ, ಮಾತೃ ಸಂಘ ಅಲಂಕಾರಿನ ಅಧ್ಯಕ್ಷೆ ಶೈಲಪ್ರಭಾ,ದ.ಕ ಜಿಲ್ಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ನಿಂಗರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂದರ್ಭೋಚಿತ ವಾಗಿ ಮಾತನಾಡಿ ಶುಭಾಹಾರೈಸಿದರು.
ಶಾಲಾ ಪ್ರಭಾರ ಮುಖ್ಯ ಗುರುಗಳಾದ ರಾಘವೇಂದ್ರ ಪ್ರಸಾದ್ ಎ ಸ್ವಾಗತಿಸಿ, ಶಿಕ್ಷಕಿ ರೇಖಾ.ಪಿ ಧನ್ಯವಾದ ಸಮರ್ಪಿಸಿ. ಶಿಕ್ಷಕ ಚೆನ್ನಪ್ಪರವರು ಕಾರ್ಯಕ್ರಮದ ನಿರೂಪಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸ್ವಾಗತ ಹಾಗೂ ಜನಪದ ನೃತ್ಯ ನಡೆಯಿತು.
ಸಂಜೆ ಸಮಾರೋಪ ಸಮಾರಂಭ ನಡೆಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸುಂದರ ಎ.ಬಿಯವರು ಪ್ರಶಸ್ತಿ ವಿತರಿಸಿದರು. ಕಿರಿಯರ ವಿಭಾಗದಲ್ಲಿ ಸಮಗ್ರ ಪ್ರಥಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು . ಸಮಗ್ರ ದ್ವಿತೀಯ ಬಹುಮಾನ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು . ಹಿರಿಯರ ವಿಭಾಗದಲ್ಲಿ ಪ್ರಥಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರು, ಸಮಗ್ರ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಲ್ಯ ಪಡೆಯಿತು.