





ಕಡಬ: ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಯೆಲ್ಲೋ ಬೆಲ್ಟ್ ವಿಭಾಗದಲ್ಲಿ ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ ಲಭಿಸಿದೆ.
ಶ್ರೀ ಭಾರತಿ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಮಾದ್ಯಮದ 4ನೇ ತರಗತಿಯ ವಿದ್ಯಾರ್ಥಿಗಳಾದ ಯದ್ವಿತ್ ಕೆ.ಪಿ. ಕಟಾ ವಿಭಾಗದಲ್ಲಿ ದ್ವಿತೀಯ, ಹರ್ಷಿತ್ ಕಟ ವಿಭಾಗದಲ್ಲಿ ತೃತೀಯ ಮತ್ತು ಕುಮಿಟೆ ವಿಭಾಗದಲ್ಲಿ ದ್ವಿತೀಯ, ಕೃತಿಕ್ ಕಟ ವಿಭಾಗದಲ್ಲಿ ತೃತೀಯ, ೩ನೇ ತರಗತಿಯ ಮೋಹಿತ್ ಕಟ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಚಂದ್ರಶೇಖರ ಕನಕಮಜಲು ತರಬೇತಿ ನೀಡಿದ್ದರು.










