ಪುತ್ತೂರು: ಕನಕ ಜಯಂತಿ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ ಏರ್ಪಡಿಸಿದ ಕನಕ ಕೀರ್ತನ ಗಂಗೋತ್ರಿ ಗಾಯನ ಸ್ಪರ್ಧೆಯಲ್ಲಿ ಪುತ್ತೂರಿನ ಸಂಗೀತ ಸಂಸ್ಥೆ ಗಾನಸಿರಿ ಕಲಾಕೇಂದ್ರದ ವಿದ್ಯಾರ್ಥಿನಿ ದೀಪ್ತಿ ಪ್ರಭು ಇವರು ಪ್ರಥಮ ಸ್ಥಾನವನ್ನು ಪಡೆದು ಕನಕ ಪುರಸ್ಕಾರವನ್ನು ಪಡೆದಿರುತ್ತಾರೆ.
ಖ್ಯಾತ ಗಾಯಕರು ಡಾ. ಕಿರಣ್ ಕುಮಾರ್ ಗಾನಸಿರಿ ಇವರ ಗಾನಸಿರಿ ಕಲಾಕೇಂದ್ರದ ಪುತ್ತೂರು ಶಾಖೆಯಲ್ಲಿ ಕಳೆದ 14 ವರ್ಷಗಳಿಂದ ಸುಗಮ ಸಂಗೀತವನ್ನು ಅಭ್ಯಾಸ ಮಾಡುತ್ತಿರುವ ಇವರು ಈಗಾಗಲೇ ನಾಡಿನಾದ್ಯಂತ ಗಾನಸಿರಿಯ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿರುತ್ತಾರೆ.
ಹಿಂದೂಸ್ತಾನಿ ಸಂಗೀತವನ್ನು ವಿದುಷಿ ಶಾರದಾ ಭಟ್ ಕಟ್ಟಿಗೆ ಇವರಲ್ಲಿ ಕಲಿಯುತ್ತಿದ್ದಾರೆ. ಇವರು ಉಪ್ಪಿನಂಗಡಿಯ ರಾಮನಗರದ ಚಂದ್ರಶೇಖರ ಪ್ರಭು ಮತ್ತು ನಯನಾ ಪ್ರಭು ದಂಪತಿಗಳ ಸುಪುತ್ರಿ ಮತ್ತು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ.