ಕೆಯ್ಯೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಅಂಬಿಕಾ ಪದವಿಪೂರ್ವ ಕಾಲೇಜು ಬಪ್ಪಳಿಗೆ, ಪುತ್ತೂರಿನಲ್ಲಿ ನಡೆಸಿದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಪ್ರಥಮ ಪಿಯುಸಿ ವಿಭಾಗದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕೆಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಎಂ ಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಇವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಜಿಲ್ಲಾ ಉಪನಿರ್ದೇಶಕರಿಂದ ಬಹುಮಾನ ಸ್ವೀಕರಿಸಿದರು.