





ಕಾಣಿಯೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯಲ್ಲಿ ನಡೆಸಲ್ಪಟ್ಟ ಜಿಲ್ಲಾ ಮಟ್ಟದ ಪ್ರಾಥಮಿಕ ವಿಭಾಗ ಶ್ಲೋಕ ಕಂಠಪಾಠದಲ್ಲಿ ಪ್ರಗತಿ ವಿದ್ಯಾ ಸಂಸ್ಥೆಯ ಧನುಷ್ ಕೆ (6) ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕಾಸ್ಪಾಡಿ ಸತ್ಯನಾರಾಯಣ ಕಲ್ಲೂರಾಯ ಮತ್ತು ಕಲ್ಪನಾ ದಂಪತಿಗಳ ಪುತ್ರ.





ಇವರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರುಗಳು ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದರು.








