ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕರ ಸಭೆ

0

ಈಶ್ವರಮಂಗಲ: ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.23ರಂದು ಶಿಕ್ಷಕ-ರಕ್ಷಕರ ಸಭೆ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಉದ್ಘಾಟಿಸಿ ಶಾಲಾ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟದ ಪೂರ್ವ ತಯಾರಿಯ ಬಗ್ಗೆ ಮಾಹಿತಿ ನೀಡಿ ಎಲ್ಲಾ ರಕ್ಷಕರ ಸಹಕಾರವನ್ನು ಕೋರಿದರು.

ಮುಖ್ಯ ಅತಿಥಿ ಇಂದ್ರಪ್ರಸ್ಥ ವಿದ್ಯಾಲಯದ ಶಿಕ್ಷಕಿ ಸುಪ್ರೀತಾ ರೈ ಮಾತನಾಡಿ ವಿವೇಕಾನಂದ ವಿದ್ಯಾವರ್ಧಕ ಸಂಘ ಹೊರತಂದಿರುವ ಇಂಗ್ಲಿಷ್ ಗ್ರಾಮರ್ ಆ್ಯಂಡ್ ಕಮ್ಯುನಿಕೇಶನ್ ಎಂಬ ಪುಸ್ತಕದ ಬಗ್ಗೆ ಮಾಹಿತಿಯನ್ನು ನೀಡುತ್ತಾ ,ಪ್ರಸ್ತುತ ಮಕ್ಕಳಿಗೆ ಇಂಗ್ಲಿಷ್ ಅತ್ಯಗತ್ಯ, ಭಾರತೀಯ ಸಂಸ್ಕೃತಿ ಮತ್ತು ಕೌಶಲ್ಯವನ್ನು ಬೆಳೆಸುವ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಮಕ್ಕಳಿಗೆ ಉಪಯೋಗವಾಗುವಂತೆ ಈ ಪುಸ್ತಕವನ್ನು ರಚಿಸಲಾಯಿತು ಎಂದರು.

ಪ್ರಾಂಶುಪಾಲ ಕೆ ಶಾಮಣ್ಣ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಶಿವರಾಂ ಪಿ, ಇವರು ಶಾಲೆಯ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪೋಷಕರ ಪಾತ್ರ ಅತಿ ಅಮೂಲ್ಯವಾದದು ಎಂದು ಹೇಳಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ಎ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಪೋಷಕರಿಗೆ ಹಮ್ಮಿಕೊಂಡಿರುವ ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಆಡಳಿತ ಮಂಡಳಿಯ ಸದಸ್ಯರಾದ ಜಯ್ ರಾಜ್ ರೈ ಇವರು ಪೋಷಕ ವರ್ಗದವರೆಲ್ಲರೂ ಶಾಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು . ಶಿಕ್ಷಕಿಯರಾದ ಜಯಸ್ವಿನಿ ಮತ್ತು ಗುಣಶ್ರೀ ಪ್ರಾರ್ಥಿಸಿ, ಶಿಕ್ಷಕಿ ಶ್ವೇತ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಲತಾ ಡಿ ಕೆ ವಂದಿಸಿದರು. ಶಿಕ್ಷಕಿ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here