ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಇವರ ಸಾರಥ್ಯದಲ್ಲಿ ಡಿ.28 ಮತ್ತು 29ರಂದು ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ವಿವಿಧ ಸಮಿತಿಗಳ ಸಭೆ ನ.24ರಂದು ಮುಕ್ರಂಪಾಡಿ ಸುಭದ್ರ ಸಭಾ ಮಂದಿರದಲ್ಲಿ ನಡೆಯಿತು.
ಶ್ರೀನಿವಾಸ ಕಲ್ಯಾಣೋತ್ಸವದ ಗೌರವ ಅಧ್ಯಕ್ಷ ಶಶಾಂಕ್ ಕೊಟೇಚಾ, ಪುತ್ತಿಲ ಪರಿವಾರದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಕಾರ್ಯಧ್ಯಕ್ಷ ಉಮೇಶ್ ಕೋಡಿಬೈಲು, ಪುತ್ತಿಲ ಪರಿವಾರದ ಅಧ್ಯಕ್ಷ ಮಹೇಂದ್ರ ವರ್ಮ, ಪ್ರಧಾನ ಕಾರ್ಯದರ್ಶಿ ರವಿ ರೈ ಕೆದಂಬಾಡಿ ಮಠ, ಉಪಾಧ್ಯಕ್ಷ ಶ್ರೀಕೃಷ್ಣ ಉಪಾಧ್ಯಾಯ, ಸ್ವಾಗತ ಸಮಿತಿಯ ಕಾರ್ಯದರ್ಶಿ ಗಣೇಶಚಂದ್ರ ಭಟ್ ಮಕರಂದ, ಕೋಶಧಿಕಾರಿ ಉದಯ ಕುಮಾರ್ ಶೆಟ್ಟಿ, ಮಹಿಳಾ ಪದಾಧಿಕಾರಿಯಾದ ಪುಷ್ಪ ರಾಜೇಶ್, ಗೌರವ ಸಲಹೆಗಾರ ಸುನಿಲ್ ಬೋರ್ಕರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.