ಪುತ್ತೂರು: ಈಶ ವಿದ್ಯಾಲಯದಲ್ಲಿ ಪೋಷಕರ ವಿಶೇಷ ಸಭೆಯು ಸಂಸ್ಥೆಯ ಪ್ರಾಂಶುಪಾಲ ಡಾ.ಗೋಪಾಲಕೃಷ್ಣರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಸಂಸ್ಥೆಯ ವಿವಿಧ ಕಾರ್ಯಚಟುವಟಿಕೆಗಳ ಬಗ್ಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವಾರ್ಷಿಕ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಸಭೆಯಲ್ಲಿ ಪೋಷಕರೊಂದಿಗೆ ಚರ್ಚಿಸಲಾಯಿತು. ಪೋಷಕರ ಅಭಿಪ್ರಾಯ ಸಂಗ್ರಹಿಸಲಾಯಿತು.
ಸಭೆಯಲ್ಲಿ ಸಂಸ್ಥೆಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪೋಷಕರು,ಉಪನ್ಯಾಸಕರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಉಪನ್ಯಾಸಕಿಯರಾದ ಕು.ರಕ್ಷಾ ಕೆ.ಎನ್ ಸ್ವಾಗತಿಸಿ, ಗೀತಾ ಕೊಂಕೋಡಿ ವಂದಿಸಿದರು. ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.