ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನೋಂದಾವಣೆ ಬಾಕಿ ಇರುವ, ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ

0

ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ: ರಮಾನಾಥ‌ ರೈ

ವಿಟ್ಲ: ಕರ್ನಾಟಕ ಘನ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ ಎಂದು ಮಾಜಿ ಸಚಿವರಾದ ಬಿ.ರಮಾನಾಥ ರೈಯವರು ಹೇಳಿದರು.

ಅವರು ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ನಡೆದ ಅನಂತಾಡಿ, ಪೆರಾಜೆ, ನೆಟ್ಲಮೂಡ್ನೂರು, ಮಾಣಿ, ಕಡೇಶಿವಾಲಯ, ಕೆದಿಲ,ಪೆರ್ನೆ ಗ್ರಾಮಗಳನ್ನೊಳಗೊಂಡು ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು‌ ಉದ್ಘಾಟಿಸಿ ಮಾತನಾಡಿದರು.

ಭಾರತ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಆರ್ಥಿಕ ಸಬಲೀಕರಣಕ್ಕಾಗಿ ಸಮಗ್ರ ಬದಲಾವಣೆಯನ್ನು ಮಾಡಿ ವಿಶ್ವವೇ ಗುರುತಿಸುವಂತಾಗಿತ್ತು. ಈಗ ಕರ್ನಾಟಕದಲ್ಲಿ ಸನ್ಮಾನ್ಯ ಸಿದ್ದರಾಮಯ್ಯರವರು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನಸಾಮಾನ್ಯರ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂವಿಧಾನದ ದಿನದ ಅಂಗವಾಗಿ ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೆಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಲಾಯಿತು.ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಜಯಂತಿ ಪೂಜಾರಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಬಂಟ್ವಾಳ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ , ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ನಾರಾಯಣ ನಾಯ್ಕ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಎಂ. ಪೆರಾಜೆ, ಮಾಣಿ ಗ್ರಾ.ಪಂ. ಉಪಾಧ್ಯಕ್ಷರಾದ ಸುಜಾತ ಪೂಜಾರಿ, ಸದಸ್ಯರುಗಳಾದ ಮೆಲ್ವಿನ್ ಕಿಶೋರ್ ಮಾರ್ಟೀಸ್, ರಮಣಿ ಡಿ.ಪೂಜಾರಿ, ಪ್ರೀತಿ ಡಿನ್ನ ಪಿರೇರ, ಸೀತಾ, ಮಾಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಪೆರಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಶರ್ಮ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ಸದಸ್ಯರಾದ ಹೈಡಾಸುರೇಶ್, ಕಾಂಚಲಾಕ್ಷಿ, ಸತೀಶ್, ಚಂದ್ರಶೇಖರ ಆಚಾರ್ಯ, ಮಹಮ್ಮದ್ ಸಿರಾಜ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನಿರಂಜನ್ ರೈ, ನಾರಾಯಣ್ ಸಾಲ್ಯಾನ್ ಅನಂತಾಡಿ, ಅಶೋಕ್ ಕುಮಾರ್ ಬರಿಮಾರು, ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಕೊಪ್ಪರಿಗೆ, ಅನಂತಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.


ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಣಿ ಗ್ರಾಮ ಪಂಚಾಯತ್ ಮಾಜಿ ಅದ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು, ವಂದಿಸಿದರು.

LEAVE A REPLY

Please enter your comment!
Please enter your name here