ಶಾಸಕಿ ಭಾಗೀರಥಿ ಮುರುಳ್ಯ ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ

0

ಕಾಣಿಯೂರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ನ.27ರಿಂದ ಡಿ.2ರ ತನಕ ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ‌. ವಿಧಾನ ಸಭೆಯ ವಸತಿ ಸೌಕರ್ಯ ಸಮಿತಿ ವತಿಯಿಂದ ಅಧ್ಯಯನ ಪ್ರವಾಸ ನಡೆಯಲಿದೆ. ಉಪ ಸಭಾಧ್ಯಕ್ಷರು ಹಾಗೂ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರ ನೇತೃತ್ವದಲ್ಲಿ ಸಮಿತಿ ಸದಸ್ಯರಾದ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ 12 ಮಂದಿಯ ತಂಡ ಅಧ್ಯಯನ ಪ್ರವಾಸ ಕೈಗೊಳ್ಳಲ್ಲಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here