ಪುತ್ತೂರು: ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ನ.26ರಂದು ನಡೆದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ದ.ಕ. ಜಿಲ್ಲೆಯ 19 ಕ್ಷೇತ್ರಗಳ 25 ಸಾಧಕರಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದಲ್ಲಿನ ಸಾಧನೆಗೆ ಪುತ್ತೂರಿನ ಎಸ್ .ಆರ್.ಕೆ. ಲ್ಯಾಡರ್ಸ್ನ ಮಾಲಕ ಕೇಶವ ಅಮೈ ಅವರಿಗೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.
ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗು ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಾಸಕ ಡಾ.ವೈ.ಭರತ್ ಶೆಟ್ಟಿ, ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಸಂಜೀವ ಮಠಂದೂರು ಸಹಿತ ಹಲವಾರು ಮಂದಿ ಈ ಸಂದರ್ಭ ಉಪಸ್ಥಿತರಿದ್ದರು.