ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ವಿಶೇಷ ಗ್ರಾಮ ಸಭೆ ನ.26 ರಂದು ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರ ಅಧ್ಯಕ್ಷತೆಯಲ್ಲಿ ನಡೆಯಿತು.
ನರೇಗಾ ಯೋಜನೆಯ ತಾಂತ್ರಿಕ ಸಹಾಯಕರಾದ ಆಕಾಂಕ್ಷರವರು ನರೇಗಾ ಯೋಜನೆಯ ಮಾಹಿತಿ ನೀಡಿ, ಪ್ರತಿಯೊಬ್ಬರು ಉದ್ಯೋಗ ಚೀಟಿ ಮಾಡಿಸಿಕೊಳ್ಳುವ ಮೂಲಕ ತಮ್ಮ ಜಮೀನಿನಲ್ಲಿ ವೈಯುಕ್ತಿಕ ಕಾಮಗಾರಿಗಳನ್ನು ಮಾಡುವಂತೆ ತಿಳಿಸಿದರು.
ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ನಮಿತಾ ಎ.ಕೆ ಉಪಸ್ಥಿತರಿದ್ದರು. ಸಭೆಯಲ್ಲಿ ಪಂಚಾಯತಿನ ಸದಸ್ಯರು, ನರೇಗಾ ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.