ಪುತ್ತೂರು: ಕುಂಬ್ರ ಪೇಟೆಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಆಗುತ್ತಿದ್ದು ಈ ಬಗ್ಗೆ ಕುಂಬ್ರಕ್ಕೆ ಪ್ರತ್ಯೇಕ ಟೌನ್ಫೀಡರ್ ಮಾಡಬೇಕು ಎಂದು ಕುಂಬ್ರ ವರ್ತಕರ ಸಂಘದ ವತಿಯಿಂದ ಕಳೆದ ಹಲವು ಮೆಸ್ಕಾಂ ಅಧಿಕಾರಿಗಳಿಗೆ ಮನವಿ ನೀಡುತ್ತಾ ಬಂದಿದ್ದರು. ಇದೀಗ ಟೌನ್ಫೀಡರ್ ಕೆಲಸ ಆಗಿದ್ದು ವರ್ತಕರ ಬೇಡಿಕೆ ಈಡೇರಿಸಿದ್ದ ಕುಂಬ್ರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಯಚ್.ಶಿವಶಂಕರ್ರವರನ್ನು ನ.27 ರಂದು ವರ್ತಕರ ಸಂಘದಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ, ಮೆಸ್ಕಾಂ ಜ್ಯೂನಿಯರ್ ಇಂಜಿನಿಯರ್ ರವೀಂದ್ರ, ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ್ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷ, ಕೆದಂಬಾಡಿ ಗ್ರಾಪಂ ಸದಸ್ಯ ಮೆಲ್ವಿನ್ ಮೊಂತೆರೋ, ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ,ಉಪಾಧ್ಯಕ್ಷ ಉದಯ ಆಚಾರ್ಯ ಕೃಷ್ಣನಗರ,ಪದ್ಮನಾಭ ಆಚಾರ್ಯ, ಹನೀಫ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ಉಪಸ್ಥಿತರಿದ್ದರು.