ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ನ.26ರಂದು ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭ ಅಂಗವಾಗಿ ಪುತ್ತೂರಿನ ಏಳು ಮಂದಿ ಸಹಿತ ದ.ಕ. ಜಿಲ್ಲೆಯ 19 ಕ್ಷೇತ್ರಗಳ 25 ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೃಷಿ ಕ್ಷೇತ್ರದಲ್ಲಿ ಸುರೇಶ್ ಬಲ್ನಾಡು, ಸಂಗೀತ ಕ್ಷೇತ್ರದಲ್ಲಿ ಜಗದೀಶ್ ಆಚಾರ್ಯ, ನೃತ್ಯದಲ್ಲಿ ಮಂಜುಳಾ ಸುಬ್ರಹ್ಮಣ್ಯ, ಉದ್ಯಮ ಕ್ಷೇತ್ರದಲ್ಲಿ ಉಪ್ಪಿನಂಗಡಿಯ ಉದ್ಯಮಿ ಸಚಿನ್ ಸುಂದರ ಗೌಡ, ನಿತ್ಯ ಚಪಾತಿ ಸಂಸ್ಥೆಯ ಮಾಲಕ ರಾಧಾಕೃಷ್ಣ, ಎಸ್.ಆರ್.ಕೆ.ಲ್ಯಾಡರ‍್ಸ್‌ನ ಮಾಲಕ ಕೇಶವ ಅಮೈ, ಲಹರಿ ಡ್ರೈಫ್ರುಟ್ಸ್ ಮಾಲಕ ಕುಸುಮಾಧರ ಅಲ್ಲದೆ ಡಾ|ಕೆ.ಚಿನ್ನಪ್ಪ ಗೌಡ(ಸಾಹಿತ್ಯ),ಪ್ರೊ.ಕೆ.ವಿ.ರಾವ್(ವಿಜ್ಞಾನ), ಗುರುವಪ್ಪ ಎನ್.ಟಿ.ಬಾಳೆಪುಣಿ(ಮಾಧ್ಯಮ), ಡಾ.ರಮೇಶ್ ಡಿ.ಪಿ., ಡಾ.ಸತೀಶ್ ಕಲ್ಲಿಮಾರ್(ವೈದ್ಯಕೀಯ), ಪ್ರಕಾಶ್ ಅಂಚನ್ ಬಂಟ್ವಾಳ(ಶಿಕ್ಷಣ), ಮಾಧವ ಸುವರ್ಣ(ಧಾರ್ಮಿಕ), ಭಕ್ತಿ ಭೂಷಣ್‌ದಾಸ್(ಗೋ ಸೇವೆ), ಪುಷ್ಪಾವತಿ ಬುಡ್ಲೆಗುತ್ತು(ನಾಟಿ ವೈದ್ಯೆ), ವೀಣಾ ಕುಲಾಲ್(ಸಮಾಜಸೇವೆ), ನರಸಿಂಹ ರಾವ್ ದೇವಸ್ಯ, ಡಾ.ಕೆ.ಎಸ್.ಗೋಪಾಲಕೃಷ್ಣ ಕಾಂಚೋಡು(ಕೃಷಿ), ಗೋಪಾಲಕೃಷ್ಣ ಭಟ್(ಸಿನೆಮಾ),ಶಿವರಾಮ ಪಣಂಬೂರು(ಯಕ್ಷಗಾನ), ಸುಜಾತ ಮಾರ್ಲ(ಯೋಗ), ಅಭಿಷೇಕ್ ಶೆಟ್ಟಿ(ಕ್ರೀಡೆ), ಮಾಧವ ಉಳ್ಳಾಲ್(ಪರಿಸರ), ವಿಕ್ರಂ ಬಿ.ಶೆಟ್ಟಿ(ಚಿತ್ರಕಲೆ)ರವರಿಗೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಮತ್ತು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ|ಧರ್ಮಪಾಲನಾಥ ಸ್ವಾಮೀಜಿ ಅವರು ‘ಕರಾವಳಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಾಸಕ ಡಾ.ವೈ.ಭರತ್ ಶೆಟ್ಟಿ, ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.